ಮಂಗಳೂರು: ದ. ಕ. ಮತ್ತು ಉಡುಪಿ ಜಿಲ್ಲೆಯ 180 ಕ್ಕೂ ಮಿಕ್ಕಿದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಮಹಾಸಭೆಯು ಮಂಗಳೂರಿನ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಆಡಿಟೋರಿಯಂನಲ್ಲಿ ಜರಗಿತು.
2023-25 ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸುಳ್ಯ ಪುನರಾಯ್ಕೆಯಾದರು. ಒಕ್ಕೂಟದ ಗೌರವಾಧ್ಯಕ್ಷ ಬೆಂಗಳೂರಿನ ಖ್ಯಾತ ಉದ್ಯಮಿ ಟಿಕೆ ಗ್ರೂಪ್ ಎಂ. ಡಿ. ಉಮ್ಮರ್ ಟಿಕೆ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿದರು.
ಒಕ್ಕೂಟವು ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ವಿಶೇಷ ತರಬೇತಿ, ವಿದ್ಯಾರ್ಥಿಗಳಿಗೆ ತರಬೇತಿ, ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ, ಪ್ರತೀ ಶಿಕ್ಷಣ ಸಂಸ್ಥೆಯ ಟಾಪರ್ ಗಳಿಗೆ ಬೆಂಗಳೂರು, ಮಂಗಳೂರಿನ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ವಸತಿ ಸಹಿತ ಉಚಿತ ಪಿ.ಯು.ಸಿ ದಾಖಲಾತಿ ಶಿಕ್ಷಣ, ಉತ್ತಮ ಶಿಕ್ಷಣ ಸಂಸ್ಥೆಗಳಿಗೆ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಇಲಾಖೆ, ಸರಕಾರ, ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದ ಮೂಲಕ ಸಮಸ್ಯೆಗಳ ಬಗೆಹರಿಸುವಿಕೆಗೆ ಪ್ರಯತ್ನ ಮೊದಲಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿದೆ.