ಮಂಗಳೂರು/ಪುತ್ತೂರು: ದ.ಕ., ಉಡುಪಿ, ಕೊಡಗು ಜಿಲ್ಲೆಗಳ ಕಾಲೇಜುಗಳಲ್ಲಿ ಜುಲೈ 25ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಮುಂದೂಡಿರುವ ಪರೀಕ್ಷೆಗಳ ದಿನಾಂಕವನ್ನು ಮರುನಿಗದಿ ಮಾಡಿ ಸಂಯೋಜಿತ ಕಾಲೇಜುಗಳಿಗೆ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ಆದೇಶದಲ್ಲಿ ತಿಳಿಸಿದ್ದಾರೆ.
ಭಾರೀ ಮಳೆ ಹಿನ್ನೆಲೆಯಲ್ಲಿ ದ.ಕ. ಸೇರಿದಂತೆ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಜು.25ರಂದು ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದ್ದು, ಅಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡುವAತೆ ತಿಳಿಸಲಾಗಿತ್ತು. ಉಳಿದಂತೆ ವೇಳಾಪಟ್ಟಿಯ ಪ್ರಕಾರವೇ ಪರೀಕ್ಷೆಗಳು ನಡೆಯಲಿವೆ.