ಮಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಲಿದ್ದಾರೆ ಮತ್ತು ವಿಜಯಪುರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ರಾಜ್ಯ ವಿಧಾನಸಭೆ ವಿಪಕ್ಷ ನಾಯಕರಾಗಲಿದ್ದಾರೆ ಎಂದು ಹೆಚ್ ಡಿ ದೇವೇಗೌಡ ಬೆಂಗಳೂರಿನಲ್ಲಿ ಜು.25 ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಇಂತಹ ಹೇಳಿಕೆಯೊಂದನ್ನು ನೀಡಿ ಉಬ್ಬೇರಿಸುವಂತೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡುವಲ್ಲಿ ಬಿಜೆಪಿಯಿಂದ ವಿಳಂಬ ವಾಗಿರುವಂತೆಯೇ ಜೆಡಿಎಸ್ ವರಿಷ್ಟರ ಈ ಹೇಳಿಕೆ ಅಚ್ಚರಿಯನ್ನುಂಟು ಮಾಡಿದೆ. ಈ ನಾಯಕರ ಆಯ್ಕೆ ಬಗ್ಗೆ ಒಂದು ಹಂತದ ಚರ್ಚೆ ನಡೆದಿದೆ ಆದರೆ ಇದು ಬಿಜೆಪಿಯ ಆಂತರಿಕ ವಿಷಯ ನಾನು ಈ ಬಗ್ಗೆ ಗಮನಹರಿಸಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಜೆಡಿಎಸ್ ಯಾವ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಷ್ಟು ಸ್ಥಾನದಲ್ಲಿ ಗೆಲ್ಲುತ್ತೇವೆ ಎನ್ನುವುದರ ಬಗ್ಗೆಯು ಚಿಂತಿಸುವುದಿಲ್ಲ. ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.