ಶಾರ್ಟ್ ಸರ್ಕ್ಯೂಟ್‌ನಿಂದಾಗಿ ವಿಮಾ ಕಚೇರಿಯಲ್ಲಿ ಬೆಂಕಿ ಅವಘಢ – ಲಕ್ಷಾಂತ ರೂ. ನಷ್ಟ

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ನಡೆದಿದ್ದು, ಲಕ್ಷಾಂತ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here