ಮಂಗಳೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜು.31 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು ಈ 4 ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಜು.26 ರಂದು ಈ ಕುರಿತು ಮಾಹಿತಿ ನೀಡಿದ ಸಿಎಂ ಜು.31 ರಂದು ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಬಿತ್ತನೆ ಕಾರ್ಯ ಚುರುಕಾಗಿ ನಡೆಯುತ್ತಿದೆ, ಇನ್ನು ಕೆಲವು ದಿನಗಳಲ್ಲಿ ಶೇ.100ರಷ್ಟು ಬಿತ್ತನೆಯಾಗಲಿದೆ ಎಂದು ಹೇಳಿರುವ ಸಿಎಂ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸುವುದಾಗಿ ಸಿಎಂ ಹೇಳಿದ್ದಾರೆ.