ಮಂಗಳೂರು (ಮುಂಬೈ): ದೇಶದ ಬಹುತೇಕ ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ಕರ್ನಾಟಕ, ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂಬೈ-ಪುಣೆ ಎಕ್ಸ್ಪ್ರೆಸ್ ವೇಯಲ್ಲಿ ಗುರುವಾರ ರಾತ್ರಿ ಕಾಮ್ ಶೆಟ್ ಸುರಂಗದ ಬಳಿ ಹೊಸದಾಗಿ ಭೂಕುಸಿತ ಸಂಭವಿಸಿದ್ದು, ವಾಹನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಹೆದ್ದಾರಿ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ಜನನಿಬಿಡ 6 ಪಥದ ರಸ್ತೆಯಲ್ಲಿನ ಮಣ್ಣಿನ ರಾಶಿ ತೆಗೆದುಹಾಕುವ ಕಾಮಗಾರಿ ನಡೆಯುತ್ತಿವೆ ಎಂದು ಅಧಿಕಾರಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಗುರುವಾರ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತವಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ಥಾಣೆ ಮತ್ತು ರಾಯಗಡದಲ್ಲಿ 100 ಮಿ.ಮೀ.ಗೂ ಅಧಿಕ ಮಳೆಯಾಗಿದೆ.
ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಶುಕ್ರವಾರ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಥಾಣೆ, ಪಾಲ್ಗರ್ ಹಾಗೂ ರತ್ನಗಿರಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
#WATCH | Severe waterlogging witnessed in several parts of Thane due to continuous heavy rainfall
Holiday declared for all the primary, secondary and higher secondary schools in Thane district on 28th July, in view of the heavy rainfall alert.#Maharashtra pic.twitter.com/CRmJrffCpa
— ANI (@ANI) July 27, 2023