ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಭೂಕಂಪ – 5.9ರಷ್ಟು ತೀವ್ರತೆ ದಾಖಲು

ಮಂಗಳೂರು(ಪೋರ್ಟ್ ಬ್ಲೇರ್): ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಶನಿವಾರ ಬೆಳಗಿನ ಜಾವ 12.53ರ ಹೊತ್ತಿಗೆ ಭೂಕಂಪ ಸಂಭವಿಸಿದೆ.

ರಿಕ್ಟರ್‌ ಮಾಪಕದಲ್ಲಿ 5.9ರಷ್ಟು ತೀವ್ರತೆಯ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಪೋರ್ಟ್ ಬ್ಲೇರ್‌ನ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ. ಭೂಕಂಪವು ಮೇಲ್ಮೈಯಿಂದ 69 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ತಜ್ಞರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here