ಮಾದಕ ವಸ್ತು ಎಂಡಿಎಂಎ ಸಾಗಾಟ – ಆರೋಪಿಯ ಬಂಧನ

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಖಚಿತ ಮಾಹಿತಿ ಮೇರೆಗೆ ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಳ್ಳಾಲದ ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ (28) ಎಂದು ಗುರುತಿಸಲಾಗಿದೆ.

ಬಂಧಿತ ನಿಂದ 25 ಗ್ರಾಂ ತೂಕದ ರೂ. 1,25,000/- ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೆ, ಆತ ಬಳಸಿಕೊಂಡಿದ್ದ ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪಕವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,35,500/- ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here