ಟೊಮೆಟೋ ತುಂಬಿದ್ದ ಲಾರಿ ನಾಪತ್ತೆ – ಟೊಮೆಟೋ ಬೆಳೆದು 3 ಕೋಟಿ ಲಾಭ ಗಳಿಸಿದ ರೈತ

ಮಂಗಳೂರು(ಕೋಲಾರ): ಟೊಮೆಟೋ ಬೆಲೆ ಹೆಚ್ಚುತ್ತಿರುವುದರ ಜತೆಗೆ ಟೊಮೆಟೊಗಾಗಿ ಅಪರಾಧ ಕೃತ್ಯಗಳು ಹೆಚ್ಚುತ್ತಿದೆ. ಟೊಮೆಟೋ ಕಳ್ಳತನ ವರದಿಯ ನಡುವೆ ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೊರಟಿದ್ದ ಟೊಮೆಟೋ ತುಂಬಿದ ಲಾರಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ. ಸುಮಾರು 21 ಲಕ್ಷ ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆಯಾಗಿರುವುದಾಗಿ ಕೋಲಾರ ಎಪಿಎಂಸಿಯ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಕೋಲಾರದ ಮೆಹಕ್ ಟ್ರಾನ್ಸ್​​ಪೋರ್ಟ್​ ಸಂಸ್ಥೆಗೆ ಸೇರಿದ ಲಾರಿ ಇದಾಗಿತ್ತು. ಇದರಲ್ಲಿ ಎ.ಜೆ.ಟ್ರೇಡರ್ಸ್ ಸಕ್ಲೇನ್ ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವವರಿಗೆ ಸೇರಿದ್ದ 21 ಲಕ್ಷ ಮೌಲ್ಯದ ಟೊಮೆಟೋಗಳಿದ್ದವು. ಲಾರಿ ಜು.30 ರಂದು ಜೈಪುರಕ್ಕೆ ತಲುಪಬೇಕಿತ್ತು. ಆದರೆ ಚಾಲಕ ಜು.29ರಿಂದ ಮೊಬೈಲ್​ ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಳ್ಳತನವಾಗಿರುವ ಅನುಮಾನ ವ್ಯಕ್ತಪಡಿಸಿ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜಸ್ಥಾನ ನೋಂದಾಯಿತ RJ 04 GC 3756 ನಂಬರಿನ ಲಾರಿಯಲ್ಲಿ ಇಬ್ಬರು ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಟೊಮೆಟೋ ಬೆಲೆ ಗಗನಕ್ಕೇರುತ್ತಿರುವುದರ ಮಧ್ಯೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40 ಸಾವಿರ ಪೆಟ್ಟಿಗೆ ಟೊಮೆಟೋ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 4 ಕೋಟಿ ರೂಪಾಯಿ ಲಾಭಗಳಿಸಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತ ಪಡಿಸಿರುವ ರೈತ ಚಂದ್ರಮೌಳಿ ಟೊಮೆಟೋ ಮಾರಾಟಾದಿಂದ 4 ಕೋಟಿ ರೂಪಾಯಿ ಗಳಿಸಿದ್ದೇನೆ 22 ಎಕರೆ ಭೂಮಿಯಲ್ಲಿ ಬೆಳೆ ತೆಗೆಯಲು ಕಮಿಷನ್‌ ಹಾಗೂ ಸಾರಿಗೆ ವೆಚ್ಚ ಸೇರಿದಂತೆ 1 ಕೋಟಿ ಖರ್ಚು ಮಾಡಿದ್ದೇನೆ. ಇದರಲ್ಲಿ ನನಗೆ 3 ಕೋಟಿ ರೂಪಾಯಿ ಲಾಭವಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here