ಮಂಗಳೂರು ವಿವಿ ಮಾಜಿ ಕುಲಪತಿ ಕೆ.ಭೈರಪ್ಪ ನಿಧನ

ಮಂಗಳೂರು: ಮಂಗಳೂರು ವಿವಿ ಯ ಮಾಜಿ ಉಪಕುಲಪತಿ ಪ್ರೊಫೆಸರ್ ಕೆ.ಬೈರಪ್ಪ(69) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ನಿವೃತ್ತಿ ಬಳಿಕ ಆದಿಚುಂಚನಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಘಾತಗೊಂಡು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here