ಸಿಸಿಬಿ ಯಿಂದ – ಎಂಡಿಎಂಎ ಮಾದಕ ವಸ್ತು ಹೊಂದಿದ್ದ 3 ಡ್ರಗ್ ಪೆಡ್ಲರ್‌ಗಳ ಬಂಧನ

ಮಂಗಳೂರು: ಡ್ರಗ್ಸ್ ಮುಕ್ತ ಮಂಗಳೂರು ನಗರ ನಿರ್ಮಿಸುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೂಲತಃ ಸಜಿಪ ಮುನ್ನೂರು ಗ್ರಾಮದ ಪ್ರಸ್ತುತ ಉಳ್ಳಾಲದ ಹಫೀಝ್ ಯಾನೆ ಅಪ್ಪಿ(35), ಸಜಿಪ ಮುನ್ನೂರಿನ ಅಮೀರ್ ಯಾನೆ ಅಮ್ಮಿ(34), ಸಜಿಪ ಮುನ್ನೂರಿನ ಜಾಕಿರ್ ಹುಸೇನ್ ಯಾನೆ ತಾಚ್ಚಿ (28) ಎಂದು ಗುರುತಿಸಲಾಗಿದೆ. ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಕಾರಿನಲ್ಲಿ ಮೂವರು ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇಧಿತ ಮಾದಕ ವಸ್ತು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 3 ಮೊಬೈಲ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 15,70,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್‌ಎಂ, ಎಸ್ಸೈಗಳಾದ ರಾಜೇಂದ್ರ ಬಿ., ಸುದೀಪ್ ಎಂವಿ, ಶರಣಪ್ಪಭಂಡಾರಿ, ನರೇಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here