ಸಿಎಂ ಸಿದ್ದು ಜೀವನಾಧಾರಿತ ಸಿನಿಮಾಕ್ಕೆ ಸಿದ್ಧತೆ

ಮಂಗಳೂರು(ಬೆಂಗಳೂರು): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರ ಲೀಡರ್ ರಾಮಯ್ಯ ವನ್ನು ತೆರೆಗೆ ತರಲು ಭರ್ಜರಿ ತಯಾರಿ ನಡೆಯುತ್ತಿದೆ. ಈ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದ್ದು, ಮೊದಲ ಭಾಗದಲ್ಲಿ ಅವರ ಬಾಲ್ಯ, ಶಾಲಾ ಕಾಲೇಜು ದಿನಗಳು ಮತ್ತು ಲಾಯರ್ ವೃತ್ತಿವರೆಗೂ ಕಥೆ ಇರಲಿದೆ. ಎರಡನೇ ಭಾಗದಲ್ಲಿ ಅವರ ರಾಜಕೀಯ ದಿನಗಳು ಮತ್ತು ಹೋರಾಟದ ಹಿನ್ನೆಲೆ ಇರಲಿದೆ.

ಸಿದ್ದರಾಮಯ್ಯ ಅವರ ಕುರಿತಾದ ಚಿತ್ರಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಕಲಾವಿದರ ಆಯ್ಕೆ ಕೂಡ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಬಾಲ್ಯ ಮತ್ತು ಯೌವನ ಹೀಗೆ ಎರಡು ಸ್ತರದ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಸತ್ಯರತ್ನಂ ನಿರ್ದೇಶನದಲ್ಲಿ ಚಿತ್ರ ತಯಾರಾಗಲಿದ್ದು, ಸಿದ್ದರಾಮಯ್ಯ ಅವರ ಪಾತ್ರಕ್ಕೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಬಣ್ಣ ಹಚ್ಚಲಿದ್ದಾರೆ ಎಂದು ಮೂಲಗಳ ಪ್ರಕಾರ ಮಾಹಿತಿ ಸಿಕ್ಕಿದೆ

ಕೊಪ್ಪಳದ ಮೂಲದ ನಿರ್ಮಾಪಕರು ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಚಿವರಾದ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಲಿದೆ.

LEAVE A REPLY

Please enter your comment!
Please enter your name here