ಕರ್ನಾಟಕದಲ್ಲೊಂದು ನಕಲಿ ವಿವಿ – ದೇಶದ 20 ನಕಲಿ ವಿವಿಗಳ ಪಟ್ಟಿ ರಿಲೀಸ್‌ ಮಾಡಿದ ಯುಜಿಸಿ

ಮಂಗಳೂರು(ನವದೆಹಲಿ): ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು(ಯುಜಿಸಿ) ದೇಶದಲ್ಲಿರುವ 20 ನಕಲಿ ವಿಶ್ವವಿದ್ಯಾಲಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ ಒಂದು ವಿವಿ ಕೂಡ ಇದರಲ್ಲಿ ಸೇರಿದೆ. ದೆಹಲಿಯಲ್ಲಿ ಗರಿಷ್ಠ 8 ನಕಲಿ ವಿವಿಗಳಿದ್ದರೆ, ಉತ್ತರ ಪ್ರದೇಶದಲ್ಲಿ ನಾಲ್ಕು ವಿವಿಗಳಿವೆ.

ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಉನ್ನತ ಶಿಕ್ಷಣ ಅಥವಾ ಉದ್ಯೋಗದ ಉದ್ದೇಶಕ್ಕಾಗಿ ಮಾನ್ಯತೆ ಹೊಂದಿರುವುದಿಲ್ಲ. ಈ ವಿಶ್ವವಿದ್ಯಾಲಯಗಳು ಯಾವುದೇ ಪದವಿಯನ್ನು ನೀಡುವ ಅಧಿಕಾರ ಹೊಂದಿರುವುದಿಲ್ಲ’ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಮಟ್ಟಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಬಡಗಾಂವಿ ಸರ್ಕಾರ ವಿಶ್ವ ಮುಕ್ತ ವಿಶ್ವವಿದ್ಯಾಲಯ ಶಿಕ್ಷಣ ಸೊಸೈಟಿ ನಕಲಿ ಎಂದು ಯುಜಿಸಿ ಘೋಷಣೆ ಮಾಡಿದೆ.

LEAVE A REPLY

Please enter your comment!
Please enter your name here