ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಮಂಗಳೂರು(ಹೊಸದಿಲ್ಲಿ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು. ಇದೇ ವೇಳೆ ಸಿಎಂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ರಾಜ್ಯದ ಪಾಲಿನ ತೆರಿಗೆ ಹಣದ ಕುರಿತಂತೆ ಮಾತುಕಾತೆ ನಡೆಸಿದರು ಎನ್ನಲಾಗಿದೆ. ಇನ್ನೊಂದೆಡೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಬೆಂಗಳೂರು-ಮೈಸೂರು ಹೆದ್ದಾರೆಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು.

LEAVE A REPLY

Please enter your comment!
Please enter your name here