



ಮಂಗಳೂರು(ಮುಂಬೈ): 2023ರ ಏಕದಿನ ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯದ ದಿನಾಂಕ ಬದಲಾವಣೆ ಮಾಡಲಾಗಿದೆ.







ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಇಂಡೋ ಪಾಕ್ ಪಂದ್ಯ ಅದೇ ಸ್ಥಳ, ಸಮಯದಲ್ಲಿ ಅಕ್ಟೋಬರ್ 14 ರಂದು ನಡೆಯಲಿದೆ. ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಿದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ವೇಳಾಪಟ್ಟಿ ಬದಲಾವಣೆಯ ಮಾಹಿತಿ ನೀಡಿದ್ದಾರೆ. ಭದ್ರತಾ ಕಾರಣಗಳಿಂದ ಕೆಲವು ಪಂದ್ಯಗಳ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.



ಅ.15ರಂದೇ ದೆಹಲಿಯಲ್ಲಿ ಅಫ್ಘಾನಿಸ್ತಾನ-ಇಂಗ್ಲೆಂಡ್ ನಡುವಿನ ಪಂದ್ಯ ನಿಗದಿಯಾಗಿರುವುದರಿಂದ ಅ.14ಕ್ಕೆ ಭಾರತ-ಪಾಕ್ ಪಂದ್ಯವನ್ನ ಬದಲಾವಣೆ ಮಾಡಲಾಗಿದೆ. ನವೆಂಬರ್ 11 ರಂದು 24 ಗಂಟೆಗಳ ಕಾಲವೂ ಪಂದ್ಯ ನಡೆಯಲಿದೆ. ಅಂದು ಡಬಲ್ ಹೆಡರ್ನಲ್ಲಿ ಪಂದ್ಯವನ್ನ ನಿಗದಿಮಾಡಲಾಗಿದ್ದು, ಆಸ್ಟ್ರೇಲಿಯಾ ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಬೆಳಗ್ಗೆ 10:30ಕ್ಕೆ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ಪಂದ್ಯವನ್ನು ಮಧ್ಯಾಹ್ನ 2 ಗಂಟೆಗೆ ನಿಗದಿಪಡಿಸಲಾಗಿದೆ.












