



ಮಂಗಳೂರು(ಚೆನ್ನೈ): ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ಮತ್ತು ಮಾಜಿ ಸಂಸದೆ ಜಯಪ್ರದಾ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ಚೆನ್ನೈನ ಎಗ್ಮೋರ್ ನ್ಯಾಯಾಲಯ ಆದೇಶ ಹೊರಡಿಸಿದೆ.







ಜಯಪ್ರದಾ ನಡೆಸುತ್ತಿದ್ದ ಚಿತ್ರಮಂದಿರದಲ್ಲಿ ದುಡಿದ ಕಾರ್ಮಿಕರಿಗೆ ಇಎಸ್‌ಐ ಹಣ ಪಾವತಿಸಿಲ್ಲ ಎಂದು ಕಾರ್ಮಿಕರು ರಾಜ್ಯ ವಿಮಾ ನಿಗಮಕ್ಕೆ ದೂರು ನೀಡಿದ್ದರು. ಪ್ರಕರಣವನ್ನು ವಜಾಗೊಳಿಸಲು ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ಪರಿಶೀಲಿಸಿದ ಚೆನ್ನೈ ಎಗ್ಮೋರ್ ಕೋರ್ಟ್, ಜಯಪ್ರದಾ ಸೇರಿದಂತೆ ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.















