



ಮಂಗಳೂರು: ಹೈದರಾಬಾದ್ ನಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಐದು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.







ಬಂಟ್ವಾಳ ತಾಲೂಕಿನ ಭೋಗೋಡಿ ನಿವಾಸಿ ಇಬ್ರಾಹಿಂ ನಂದಾವರ ಹಾಗೂ ಕುಂಪಣಮಜಲು ನಿವಾಸಿಯಾಗಿದ್ದ ಪ್ರಸ್ತುತ ವಳಚಿಲ್ ನಿವಾಸಿಯಾಗಿರುವ ಮುಸ್ತಾಕ್ ಎಂಬವರ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೈದರಾಬಾದ್ ನಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ದೇಶದಲ್ಲೆಡೆ ಒಟ್ಟು ಐದು ರಾಜ್ಯಗಳಲ್ಲಿ ಎನ್ಐಎ ರವಿವಾರ ದಾಳಿ ನಡೆಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.















