



ಮಂಗಳೂರು: ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಂಜೇಶ್ವರ ಮೂಲದ ಇಬ್ರಾಹಿಂ ಅರ್ಷಾದ್ ವಿ.ಕೆ(30) ಎಂಬಾತನನ್ನು ಬಂಧಿಸಿದ್ದಾರೆ.







ಬಂಧಿತನಿಂದ ಒಟ್ಟು 100 ಗ್ರಾಂ ತೂಕದ ರೂ. 5,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000/-, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ರೂ 5,11,500/- ಎಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.















