ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ, ಗ್ರಂಥಾಲಯದ ಹೆಸರನ್ನು ಬದಲಾಯಿಸಿದ ಕೇಂದ್ರ ಸರಕಾರ

ಮಂಗಳೂರು(ಹೊಸದಿಲ್ಲಿ): ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ ಎಂದು ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯದ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ಭಾರತದ 77 ನೇ ಸ್ವಾತಂತ್ರ್ಯ ದಿನದಂದು ಈ ಹೆಸರನ್ನು ಅಧಿಕೃತಗೊಳಿಸಲಾಗಿದೆ.

ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಲೈಬ್ರರಿಯ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷರು ಕೂಡ ಈ ಕುರಿತು ಪೋಸ್ಟ್ ಮಾಡಿ. “ನೆಹರೂ ಮೆಮೋರಿಯಲ್ ಮ್ಯೂಸಿಯಂ ಹಾಗೂ ಲೈಬ್ರರಿ ಈಗ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ  ಸೊಸೈಟಿ ಆಗಿ ಆಗಸ್ಟ್ 14, 2023 ರರಂದು ಜಾರಿಗೆ ಬರುವಂತೆ ಬದಲಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ಜೂನ್ ತಿಂಗಳಲ್ಲಿ ಎನ್‌ಎಂಎಂಎಲ್ ಸೊಸೈಟಿಯ ವಿಶೇಷ ಸಭೆಯಲ್ಲಿ ಅದರ ಹೆಸರನ್ನು ಪಿಎಂಎಂಎಲ್ ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ಸೊಸೈಟಿಯ ಉಪಾಧ್ಯಕ್ಷ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

 

LEAVE A REPLY

Please enter your comment!
Please enter your name here