ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ-ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಮಂಗಳೂರು:ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮುಂಗಾರು ದುರ್ಬಲವಾಗಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಗಸ್ಟ್ 17ರಿಂದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂಜಾಬ್, ದೆಹಲಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮುಂಗಾರು ಕೊರತೆ ಎದುರಾಗಿದೆ, ಸ್ಕೈಮೆಟ್ ವರದಿ ಪ್ರಕಾರ, ಅರುಣಾಚಲ ಪ್ರದೇಶ, ಪೂರ್ವ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here