ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬ್ಯುಲೆನ್ಸ್‌ – ಚಾಲಕ ಮೃತ್ಯು

ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಬಂಟ್ವಾಳದ ವಗ್ಗ ಬಳಿ ಪಲ್ಟಿಯಾಗಿದ್ದು, ಆಂಬುಲೆನ್ಸ್ ಚಾಲಕ ತುಂಬೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಆ.18ರಂದು ನಡೆದಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ. ಆಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಬದಲಿ ವಾಹನದ ವ್ಯವಸ್ಥೆ ಮಾಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here