ಮಂಗಳೂರು(ಗುಜರಾತ್): ಗುಜರಾತ್‌ನ ಭರೂಚ್ ಜಿಲ್ಲೆಯ ಸರೋದ್ ಗ್ರಾಮದ ಪಿಐ ಇಂಡಸ್ಟ್ರೀಸ್‌ನಲ್ಲಿನ ಟ್ಯಾಂಕ್‌ನಲ್ಲಿ ಗ್ಯಾಸ್ ಸೋರಿಕೆಯುಂಟಾದ ಪರಿಣಾಮ 28 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಿಲ ಸೋರಿಕೆಯಾದ ವರದಿಯಾದಾಗ ಕಾರ್ಖಾನೆಯಲ್ಲಿ ಸುಮಾರು 2,000 ಕಾರ್ಮಿಕರು ಇದ್ದು, ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವೇದಾಚ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವೈಶಾಲಿ ಅಹಿರ್ ತಿಳಿಸಿದ್ದಾರೆ. ಇನ್ನು ಸದ್ಯ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯನ್ನು ತಡೆಯಲಾಗಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ತಹಬದಿಗೆ ತಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.