ಮಂಗಳೂರು (ಅಥೆನ್ಸ್) : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್ ದೇಶದ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗ್ರೀಕ್ ಅಧ್ಯಕ್ಷೆ ಕ್ಯಾಥರಿನಾ ಸಕೆಲರೊಪೌಲೊ ಅವರು ಪ್ರಧಾನಿ ಮೋದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ. ಬಳಿಕ ಗ್ರೀಸ್ ದೇಶಕ್ಕೆ ಧನ್ಯವಾದ ಸಲ್ಲಿಸಿರುವ ಪ್ರಧಾನಿ ಮೋದಿ, ಈ ಪ್ರಶಸ್ತಿ ಭಾರತದ ಬಗ್ಗೆ ಗ್ರೀಸ್ ಜನತೆಗಿರುವ ಗೌರವದ ಪ್ರತೀಕವಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಶುಕ್ರವಾರ ಗ್ರೀಸ್‌ಗೆ ಭೇಟಿ ನೀಡಿದ್ದಾರೆ. 40 ವರ್ಷಗಳ ನಂತರ ಗ್ರೀಸ್‌ಗೆ ಭೇಟಿ ನೀಡುತ್ತಿರುವ ಭಾರತದ ಪ್ರಧಾನಿ ಎಂಬ ಹಿರಿಮೆಗೂ ಮೋದಿ ಪಾತ್ರರಾಗಿದ್ದಾರೆ.
ಎಕ್ಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
I thank President Katerina Sakellaropoulou, the Government and people of Greece for conferring upon me The Grand Cross of the Order of Honour. This shows the respect the people of Greece have towards India. @PresidencyGR pic.twitter.com/UWBua3qbPf
— Narendra Modi (@narendramodi) August 25, 2023