ವಿಶ್ವ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್-2023 – 59 ಕೆ.ಜಿ. ವಿಭಾಗದಲ್ಲಿ ಆದರ್ಶ್ ಬಿ ಅತ್ತಾವರ್ ಗೆ ಚಿನ್ನದ ಪದಕ

ಮಂಗಳೂರು: ರೊಮೇನಿಯಾದ ಕ್ಲುಜ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್-2023 ರ 59 ಕೆ.ಜಿ. ವಿಭಾಗದಲ್ಲಿ ಮಂಗಳೂರಿನ ಆದರ್ಶ್ ಬಿ ಅತ್ತಾವರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಮಂಗಳೂರು ಅತ್ತಾವರ ನಿವಾಸಿ ಭರತ್ ಕುಮಾರ್ ಹಾಗೂ ಚಂದ್ರಾಕ್ಷಿ ದಂಪತಿ ಪುತ್ರರಾದ ಇವರು ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿನಲ್ಲಿ ಉದ್ಯೋಗಿಯಾಗಿದ್ದಾರೆ. 2021-22ರಲ್ಲಿ ಟರ್ಕಿಯಲ್ಲಿ ನಡೆದ ಏಷಿಯನ್ ಹಾಗೂ ವರ್ಲ್ಡ್‌ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿಯೂ ಚಿನ್ನದ ಪದಕ ಗೆದ್ದಿದ್ದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಬಾಲಾಂಜನೇಯ ವ್ಯಾಯಾಮ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here