ಮಂಗಳೂರು (ಮೈಸೂರು) : ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ಸಿಗಲಿದ್ದು, ರಾಜ್ಯದ 1.10 ಕೋಟಿ ಮಹಿಳೆಯರ ಖಾತೆಗೆ 2,000 ಜಮಾ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಲಿದ್ದಾರೆ.1.10 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಿಳೆಯರ ಖಾತೆಗೆ ನಾಳೆ ಹಣ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಮುಂಡೇಶ್ವರಿ ಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು.