ಚಂದ್ರನ ದಕ್ಷಿಣ ಧ್ರುವದ ಮೇಲ್ಮೈನಲ್ಲಿ ಗಂಧಕ ಪತ್ತೆಹಚ್ಚಿದ ರೋವರ್

ಮಂಗಳೂರು(ಬೆಂಗಳೂರು): ಚಂದ್ರನ ದಕ್ಷಿಣ ಧ್ರುವದ ಮೇಲ್ಮೈನಲ್ಲಿ ಗಂಧಕ ಇರುವುದನ್ನು ಚಂದ್ರಯಾನ-3ರ ರೋವರ್ ಪ್ರಜ್ಞಾನ್ ಪತ್ತೆ ಮಾಡಿದೆ.

ನಿರೀಕ್ಷೆಯಂತೆ ಚಂದ್ರನಲ್ಲಿ ಅಲ್ಯುಮಿನಿಯಂ, ಕ್ಯಾಲ್ಸಿಯಂ, ಕಬ್ಬಿಣ, ಕ್ರೋಮಿಯಂ, ಟೈಟೆನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕ ಧಾತುಗಳು ಪತ್ತೆಯಾಗಿವೆ. ಜಲಜನಕ ಧಾತುವಿನ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಇಸ್ರೋ ತಿಳಿಸಿದೆ. ಪ್ರಜ್ಞಾನ್‌ ನಲ್ಲಿರುವ ಲಿಬ್ ಉಪಕರಣವು ಈ ಧಾತುಗಳನ್ನು ಪತ್ತೆ ಮಾಡಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್ ಇಳಿದು ಇಂದಿಗೆ ಒಂದು ವಾರ ತುಂಬಲಿದೆ. ಇನ್ನು ಏಳು ದಿನಗಳ ಕಾಲ ಪ್ರಯೋಗ ಮುಂದುವರಿಸಲಿದ್ದು, ಸೆ. 5ರ ವೇಳೆಗೆ ಚಂದ್ರನಲ್ಲಿ ಕತ್ತಲು ಆವರಿಸಲಿದೆ. ಮತ್ತೆ ಬೆಳಕು ಕಾಣಲು ಮುಂದಿನ 14 ದಿನಗಳು ಕಾಯಬೇಕಾಗಿದ್ದು, ಲ್ಯಾಂಡರ್ ಮತ್ತು ರೋವರ್‌ ಗಳಿಗೆ ಮರು ಜೀವ ನೀಡಲು ಸಾಧ್ಯವೇ ಎಂಬುವುದರ ಬಗ್ಗೆ ಇಸ್ರೋ ಪ್ರಯತ್ನ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here