ಶ್ರೀಶೈಲ ದೇವಸ್ಥಾನ ಬಳಿ ಅಗ್ನಿ ಅವಘಡ – 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

ಮಂಗಳೂರು(ಆಂಧ್ರಪ್ರದೇಶ): ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ. ತಡರಾತ್ರಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಶ್ರೀಶೈಲದ ಲಲಿತಾಂಬಿಕಾ ಶಾಪಿಂಗ್ ಕಾಂಪ್ಲೆಕ್ಸ್‌ ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಗಳು ಸುಟ್ಟು ಕರಕಲಾಗಿವೆ. ಎಲ್ ಬ್ಲಾಕಿನ ಅಂಗಡಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಅಗ್ನಿ ಅವಘಡದಲ್ಲಿ 15 ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಸದಾ ಭಕ್ತರಿಂದ ತುಂಬಿ ತುಳುಕುವ ಶ್ರೀಶೈಲ ದೇವಸ್ಥಾನದ ಅಂಗಡಿಗಳಲ್ಲಿ ಬುಧವಾರ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಯಂತ್ರಗಳನ್ನು ಬಳಸಲಾಯಿತು.

LEAVE A REPLY

Please enter your comment!
Please enter your name here