ಸೆಪ್ಟೆಂಬರ್‌ನಲ್ಲಿ ಮುಂಗಾರು ಮತ್ತೆ ಚುರುಕು – ಐಎಂಡಿ

ಮಂಗಳೂರು(ನವದೆಹಲಿ): ನೈಋತ್ಯ ಮುಂಗಾರು ವಾರಾಂತ್ಯದಲ್ಲಿ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು‌ ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊಹಾಪಾತ್ರ, ಸೆಪ್ಟೆಂಬರ್‌ನಲ್ಲಿ ವಾಡಿಕೆ ಮಳೆ ಆಗುವ ಸಾಧ್ಯತೆ ಇದೆ. ದೀರ್ಘಾವಧಿಯ ಸರಾಸರಿ ಮಳೆ ಪ್ರಮಾಣ 167.9 ಮಿ.ಮೀ.ನ ಶೇಕಡ 91-109 ರಷ್ಟು ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದರು. ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಿದ್ದರೂ, ಜೂನ್-ಸೆಪ್ಟೆಂಬರ್ ಅವಧಿಯಲ್ಲಿನ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯೇ ಇರಲಿದೆ ಎಂದು ಮೊಹಾಪಾತ್ರ ಹೇಳಿದರು.

LEAVE A REPLY

Please enter your comment!
Please enter your name here