ಡ್ರಗ್ ಪೆಡ್ಲರ್ – ನೈಜೀರಿಯಾ ಮೂಲದ ಮಹಿಳೆ ಪೋಲಿಸರ ಬಲೆಗೆ

ಮಂಗಳೂರು: ಡ್ರಗ್ಸ್ ಮಾರಾಟ ಜಾಲದ ಪ್ರಮುಖ ಡ್ರಗ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯೊಬ್ಬರನ್ನು  ಮಂಗಳೂರು ಪೋಲಿಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್ ಗಳನ್ನು ಪತ್ತೆ ಹಚ್ಚಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದರು. ಈ ಡ್ರಗ್ ದಂಧೆಯ ಹಿಂದಿನ ಕಿಂಗ್ ಪಿನ್ ಅನ್ನು ಪತ್ತೆ ಹಚ್ಚುವ ಸಲುವಾಗಿ ತನಿಖೆಯನ್ನು ಕೈಗೊಂಡ ಪೊಲೀಸರಿಗೆ ಈ ಮಾದಕ ವಸ್ತುಗಳನ್ನು ಆರೋಪಿಗಳಿಗೆ ನೈಜೀರಿಯಾ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ವಿದೇಶಿ ಮಹಿಳೆಯೊಬ್ಬಳು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಈ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು ಯಾನೆ ರೆಜಿನಾ ಜರಾ ಯಾನೆ ಆಯಿಶಾ(33) ಎಂಬಾಕೆಯನ್ನು ಬಂಧಿಸಿದ್ದಾರೆ. ಬಂಧಿತಳ ವಶದಲ್ಲಿದ್ದ ಒಟ್ಟು 400 ಗ್ರಾಂ ತೂಕದ ರೂ. 20ಲಕ್ಷ -ಮೌಲ್ಯದ ಎಂಡಿಎಂಎ, ಐಫೋನ್, 2910 ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here