ಮಂಗಳೂರು (ಬೆಂಗಳೂರು): ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸೆ.13ರ ಅಂತ್ಯದ ವೇಳೆಗೆ ಆಕ್ಷೇಪಣೆ ಸಲ್ಲಿಸಿಲು ಹೈಕೋರ್ಟ್ ಸೂಚನೆ ನೀಡಿದೆ.
ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿ ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿದೆ.