ಮಂಗಳೂರು: 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಜಪ್ಪಿನಮೊಗರುವಿನ ಪ್ರೀತಮ್ ಆಚಾರ್ಯ(38) ಬಂಧಿತ ಆರೋಪಿ. ಆರೋಪಿಯನ್ನು ಪೊಲೀಸರು ಮುಂಬೈಯಲ್ಲಿ ವಶಕ್ಕೆ ಪಡೆದುಕೊಂಡಿದ್ದರು. ಈತನ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಆರೋಪಿ ವಿರುದ್ಧ ಎಲ್.ಪಿ.ಸಿ ವಾರೆಂಟ್ ಜ್ಯಾರಿಯಾಗಿದ್ದು, ಆರೋಪಿಯು ಹೋಟೆಲ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸದಲ್ಲಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್, ಕಾನೂನು ಸುವ್ಯವಸ್ಥೆ ವಿಭಾಗದ ವೆಸ್ಟ್ ಮುಂಬೈ ಉಪ ಪೊಲೀಸ್ ಆಯುಕ್ತ ಅಂಶುಕುಮಾರ್, ಅಪರಾಧ ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಕೇಂದ್ರ ಉಪ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ರವರ ಮಾರ್ಗದರ್ಶನದಂತೆ, ಉರ್ವ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಭಾರತಿ ಜಿ ರವರ ನೇತೃತ್ವದಲ್ಲಿ ಉರ್ವ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಹರೀಶ್ ಹೆಚ್.ಎ., ಸಹಾಯಕ ಪೊಲೀಸ್ ಉಪ ನಿರೀಕ್ಷಕ ಉಲ್ಲಾಸ್ ಮಹಲೆ, ಎಚ್.ಸಿ-ಸುಧಾಕರ್, ಮಹಿಳಾ ಕಾನ್ ಸ್ಟೇಬಲ್ ಸಫ್ರೀನಾ ವಿಶೇಷ ಕರ್ತವ್ಯದಲ್ಲಿ ಮುಂಬೈಗೆ ತೆರಳಿ ಆರೋಪಿ ಕೆಲಸ ಮಾಡುವ ಹೊಟೇಲ್ ನಿಂದ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.