ಮಂಗಳೂರು(ಬೆಂಗಳೂರು): ಜೆಡಿಎಸ್ ನ ಏಕೈಕ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅನರ್ಹತೆ ಬಳಿಕ ಇದೀಗ ಶಾಸಕ ಹೆಚ್.ಡಿ. ರೇವಣ್ಣ ಅವರಿಗೂ ಕಂಟಕ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪದಡಿ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಿಧಾನಸಭಾ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ ಮಾಡಿದೆ. ಶಾಸಕ ರೇವಣ್ಣ ಸೇರಿದಂತೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರಿಗೂ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜೆಡಿಎಸ್ ಪಾಳಯದಲ್ಲಿ ಆತಂಕ ಉಂಟಾಗಿದೆ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಹೈಕೋರ್ಟ್ ಅನರ್ಹಗೊಳಿಸಿದ ಬೆನ್ನಲ್ಲೇ, ಮತ್ತೊಂದು ಸಂಕಷ್ಟ ಎದುರಾಗಿದೆ.