ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಇಂದು ಪ್ರಕಟ

ಮಂಗಳೂರು: 2024 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಗೆ ಪೈಪೋಟಿ ನೀಡುವ ಉದ್ದೇಶದಿಂದ ರಚಿತಗೊಂಡಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು 6 ರಾಜ್ಯಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಆಯ ರಾಜ್ಯಗಳಲ್ಲಿ ಮತಎಣಿಕೆ ಕಾರ್ಯ ಬೆಳಿಗ್ಗೆ 8 ರಿಂದ ಆರಂಭಗೊಂಡಿದೆ. ಉತ್ತರಾಖಂಡದ ಭಗೇಶ್ವರ, ಉತ್ತರ ಪ್ರದೇಶದ ಘೋಸಿ, ಕೇರಳದ ಪುತ್ತುಪಲ್ಲಿ, ಪಶ್ಚಿಮಬಂಗಾಳದ ಧೂಪ್ಗುರಿ, ಜಾರ್ಖಂಡ್‌ ನ ದುಮ್ರಿ ಮತ್ತು ತ್ರಿಪುರಾದ ಬಕ್ಸ್‌ ನಗರ ಮತ್ತು ಧನಪುರ ಕ್ಷೇತ್ರಗಳಿಗೆ ಸೆ.5 ರಂದು ಚುನಾವಣೆ ನಡೆದಿತ್ತು.

LEAVE A REPLY

Please enter your comment!
Please enter your name here