ಜೆಡಿಎಸ್‌ ಜೊತೆ ಮೈತ್ರಿ ಇಲ್ಲ ಎಂದ ಮಾಜಿ ಸಚಿವ ಆರ್.ಅಶೋಕ್‌

ಮಂಗಳೂರು(ಮಂಡ್ಯ): ʼಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜೊತೆ ಮೈತ್ರಿ ಇಲ್ಲʼ ಎಂದು ಮಾಜಿ ಸಚಿವ ಆರ್.ಅಶೋಕ್‌ ಹೇಳಿದ್ದಾರೆ.

ಸೆ.8ರಂದು ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯಕ್ಕೆ ಬಿಜೆಪಿ ನಾಯಕರ ನಿಯೋಗದೊಂದಿಗೆ ಭೇಟಿ ನೀಡದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಜೆಡಿಎಸ್‌ ನೊಂದಿಗೆ ಯಾವುದೇ ಹೊಂದಾಣಿಕೆ ಇಲ್ಲ ಎಂದು ದೆಹಲಿ ನಾಯಕರು ಫೋನ್‌ ಮಾಡಿ ತಿಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಮೀಕ್ಷೆ ಮಾಡಿ ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here