ಖಾಸಗಿ ಸಾರಿಗೆಯವರ ನಷ್ಟ ತುಂಬಲು ಸರಕಾರಕ್ಕೆ ಅಸಾಧ್ಯ – ಸಿಎಂ. ಪರಿಹಾರ ಕೊಡಲು ಪ್ರಾಯೋಗಿಕವಾಗಿ ಸಾಧ್ಯವಿಲ್ಲ-ಸಾರಿಗೆ ಸಚಿವರು

ಮಂಗಳೂರು(ಬೆಂಗಳೂರು): ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಸಂಸ್ಥೆಗಳಿಗೆ ನಷ್ಟವುಂಟಾಗಿದೆ ಎಂಬುದನ್ನು ಸಮರ್ಥನೀಯವಲ್ಲ. ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸರ್ಕಾರಕ್ಕೆ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟದವರು ಕರೆ ನೀಡಿರುವ ‘ಬೆಂಗಳೂರು ಬಂದ್‌’ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾತನಾಡಿದ ಅವರು, “ಶಕ್ತಿ ಯೋಜನೆಯು ಮಹಿಳೆಯರಿಗೆಂದು ಮಾಡಿದ ಸರ್ಕಾರದ ಯೋಜನೆ. ಅದರಿಂದ ಖಾಸಗಿ ಸಾರಿಗೆಯವರಿಗೆ ನಷ್ಟ ಉಂಟಾಗಿದೆ ಎಂಬುದನ್ನು ನಾವು ಒಪ್ಪಲ್ಲ. ಹಾಗಾಗಿ, ನಷ್ಟ ತುಂಬಿಕೊಡಲು ಸರ್ಕಾರಕ್ಕೆ ಆಗಲ್ಲ” ಎಂದು ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಂದ್, ಪ್ರತಿಭಟನೆ​ ಮಾಡಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರ ಹಕ್ಕು. ಅದು ಶಾಂತಿಯುತವಾಗಿರಬೇಕು. ನಾವು ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ತಂದಿದ್ದೇವೆ. ಅದರಿಂದ ಖಾಸಗಿ ಬಸ್​ನವರು ನಷ್ಟ ಆಗಿದೆ ಎನ್ನುತ್ತಿದ್ದಾರೆ. ಖಾಸಗಿ ಸಾರಿಗೆಯವರು ನಷ್ಟ ತುಂಬಿಕೊಡಿ ಎಂಬ ಬೇಡಿಕೆ ಇದೆ. ಸಾರಿಗೆಯವರ ಈ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ನಮ್ಮ ಶಕ್ತಿ ಯೋಜನೆಗೆ ಬಜೆಟ್‌ನಲ್ಲಿ 2500 ಕೋಟಿ ರೂ. ಇಡಲಾಗಿದೆ. ಆಟೋ ಚಾಲಕರು ಪ್ರತಿ ತಿಂಗಳು 10 ಸಾವಿರ ಕೊಡು ಅಂತಾರೆ. ಎಲ್ಲಿಂದ ಹಣ ತರಬೇಕು? ಸಾರಿಗೆ ಚಾಲಕರು 3 ಲಕ್ಷ ಮಂದಿ ಇದ್ದಾರೆ. ಅವರ ಬೇಡಿಕೆ ಪ್ರಕಾರ ಪರಿಹಾರ ಕೊಟ್ಟರೆ ಅದೇ 5,009 ಕೋಟಿ ರೂ. ಆಗುತ್ತದೆ. ಇದನ್ನು ಈಡೇರಿಸಲು ಸಾಧ್ಯವೇ” ಎಂದು ಪ್ರಶ್ನಿಸಿದರು. ಸಾರಿಗೆ ಸಂಸ್ಥೆಗಳ ಬೇಡಿಕೆ ಎಲ್ಲವೂ ಈಗಿನದ್ದಲ್ಲ. ಕಳೆದ ನಾಲ್ಕೈದು ವರ್ಷಗಳ ಹಳೆಯ ಬೇಡಿಕೆಗಳು ಅವು. ಟ್ಯಾಕ್ಸ್ ಹೆಚ್ಚಳ ಮತ್ತು ಶಕ್ತಿ ಯೋಜನೆ ಮಾತ್ರ ನಮ್ಮ ಸರ್ಕಾರ ಬಂದ ಮೇಲೆ ಆಗಿದೆ. ಮುಖ್ಯಮಂತ್ರಿಗಳು ಸಭೆ ಕರೆದಾಗ ಸಾರಿಗೆ ಸಂಘಗಳು ಬರಲಿಲ್ಲ. ಕಾನೂನಾತ್ಮಕವಾಗಿ ಏನು ಈಡೇರಿಸಲು ಸಾಧ್ಯ ಅದನ್ನು ಈಡೇರಿಸುತ್ತೇವೆ. ಸಾರಿಗೆ ಚಾಲಕರ ಪರವಾಗಿಯೇ ನಮ್ಮ ‌ಸರ್ಕಾರ ಇದೆ ಎಂದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here