ಮಂಗಳೂರು(ನವದೆಹಲಿ): ಸುಪ್ರೀಂ ಕೋರ್ಟ್ ವಕೀಲೆಯಾದ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೆ.11ರಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು ಸಿನ್ಹಾ (61) ಎಂದು ಗುರುತಿಸಲಾಗಿದೆ.
ರೇಣು ಸಿನ್ಹಾ ತನ್ನ ಸಹೋದರನ ಕರೆಗಳಿಗೆ ಸ್ಪಂದಿಸದ ಹಿನ್ನೆಲೆ ಆತಂಕಗೊಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು, ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬಂಗಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಮಾಹಿತಿ ಪ್ರಕಾರ, ಬಂಗಲೆಯನ್ನು ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಪ್ರವೇಶ ಮಾಡಿದಾಗ ರೇಣು ಸಿನ್ಹಾ ಶವ ಬಾತ್ ರೂಂನಲ್ಲಿ ಬಿದ್ದಿತ್ತು. ಹತ್ಯೆ ಮಾಡಿದ ಆರೋಪಿ ಅಜಯ್ ನಾಥ್ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಅವರನ್ನು ಬಂಧಿಸಲಾಗಿದೆ. ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಸಹೋದರ ಬಹಿರಂಗಪಡಿಸಿದ್ದಾನೆ.