ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮೂವರು ಪೊಲೀಸರ ವಶಕ್ಕೆ

ಮಂಗಳೂರು(ಕಾಸರಗೋಡು): ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮುಟ್ಟತ್ತೋಡಿಯ ಖಮರು ನ್ನಿಸಾ (42), ಪಿ. ಎ ಮುಹಮ್ಮದ್ ಶರೀಫ್ (40) ಮತ್ತು ಚೇರೂರಿನ ಮುಹಮ್ಮದ್ ಇರ್ಷಾದ್ (38) ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಾಹನ ತಪಾಸಣೆ ನಡೆಸಿದ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಕಾರಿನಿಂದ 3.99 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಮಾರಾಟಕ್ಕೆ ಕೊಂಡೊಯ್ಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here