



ಮಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಯಿಂದ ಬೈಂದೂರು ಕ್ಷೇತ್ರದ ಟಿಕೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಗೋವಿಂದ ಪೂಜಾರಿ ಎಂವರಿಗೆ 7 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಫೈರ್ ಬ್ರಾಂಡ್ ಭಾಷಣಗಾರ್ತಿ ಚೈತ್ರಾ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಮತ್ತು ಧನರಾಜ್ ಗೆ ಸೆ.23ರ ವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.



















