ಮಂಗಳೂರು(ಉಡುಪಿ): ಉಡುಪಿಯ ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆ ಅವಘಡವೊಂದು ಸಂಭವಿಸಿದ್ದು ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ನಿರ್ಮಾಣ ಹಂತದ ಮನೆಯೊಂದಕ್ಕೆ ಬಂದ ಗ್ರಾನೈಟ್ ನ್ನು ಲಾರಿಯಿಂದ ಅನ್ ಲೋಡ್ ಮಾಡುವ ವೇಳೆ ಗ್ರಾನೈಟ್ ಮೈಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಮೃತಪಟ್ಟ ಕೂಲಿ ಕೆಲಸಗಾರರನ್ನು ಬಾಬುಲ್ಲ ಮತ್ತು ಬಾಸ್ಕರ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.