ಚೈತ್ರಾ ಕುಂದಾಪುರ ಅವರಿಗೆ ಫಿಟ್ಸ್ ಇಲ್ಲ – ಆರೋಗ್ಯ ಸ್ಥಿರವಾಗಿದೆ – ಡಾ.ಅಸೀಮಾ ಬಾನು

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಫಯರ್‌ ಬ್ರ್ಯಾಂಡ್‌ ಭಾಷಣಗಾರ್ತಿ ಚೈತ್ರಾ ಕುಂದಾಪುರ ಇಂದು ಮುಂಜಾನೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿರುವಾಗ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ನೀಡುತ್ತಿರುವ ವೈದ್ಯೆ ಚೈತ್ರಾ ಅವರಿಗೆ ಫಿಟ್ಸ್ ಇಲ್ಲ ಎಂದು ಹೇಳಿದ್ದಾರೆ.

ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದ್ದು ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಚೈತ್ರಾ ಕುಂದಾಪುರಗೆ ನಡೆಸಿದ ಎಲ್ಲಾ ಟೆಸ್ಟ್ ನಲ್ಲೂ ನಾರ್ಮಲ್ ಇದೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದು ಡಾ.ಅಸೀಮಾ ಬಾನು ಹೇಳಿದ್ದಾರೆ.

LEAVE A REPLY

Please enter your comment!
Please enter your name here