ಮಂಗಳೂರು: ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಕೊನೆಯುಸಿರೆಳೆದು ಸವಾರ ಗಾಯಗೊಂಡ ಘಟನೆ ಸೆ.15ರ ಸಂಜೆ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಬಳಿ ಕಿನ್ನಿಗೋಳಿ ಕಡೆಯಿಂದ ಮೂಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಹೋಂಡಾ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಬೈಕನ್ನು ದೂಡಿಕೊಂಡು ಹೋಗಿದ್ದು, ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಸಹಸವಾರ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ.