ಮಂಗಳೂರು: ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಹೃದಯಾಘಾತದಿಂದ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ.
ಇಂದು(ಸೆ.16) ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ.ಇನ್ನು 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಇನ್ನೂ ಏಳು ವರ್ಷಗಳ ಕಾಲ ಕರ್ತ್ಯವ್ಯ ನಿರ್ವಹಿಸಬೇಕಿತ್ತು. ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿಯಾಗಿ ಕರ್ತ್ಯವ್ಯ ನಿರ್ವಹಿಸಿದ್ದರು.