ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅಸಿಂಧು ಕೇಸ್ – ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಸುಪ್ರೀಂ

ಮಂಗಳೂರು: ಹಾಸನದ ಜೆಡಿಎಸ್ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೆ.18ರಂದು ಮಧ್ಯಂತರ ತಡೆ ನೀಡಿದೆ.

ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌ ಅವರಿದ್ದ ಪೀಠವು, ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಸಂಸತ್‌ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿರುವ ಸುಪ್ರೀಂ ಕೋರ್ಟ್ ಸಂಸತ್‌ನಿಂದ ಬರುವ ಭತ್ಯೆ ಬಳಕೆ ಮಾಡದಂತೆ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here