ತಮಿಳು ನಟ, ಸಂಗೀತ ನಿರ್ದೇಶಕ ವಿಜಯ್‌ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ

ಮಂಗಳೂರು(ಚೆನ್ನೈ): ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

16 ವರ್ಷ ವಯಸ್ಸಿನ ಮೀರಾ ತಮ್ಮ ನಿವಾಸದ ರೂಮಿನಲ್ಲಿ ಸೆ.19ರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮೀರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ಮೀರಾ ಖಿನ್ನತೆಯಿಂದ ಬಳಲುತ್ತಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೀರಾ ಸಂಬಂಧಿಕರು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here