ಮಂಗಳೂರು(ಬೆಂಗಳೂರು): ಮುಂದಿನ ಕೆಲ ಗಂಟೆಗಳ ಕಾಲ ಗುಜರಾತ್ ಸೇರಿ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಸ್ಥಾನ, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ಕೊಂಕಣ-ಗೋವಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಒಡಿಶಾದಲ್ಲಿ ಭಾರೀ ಮಳೆ ಮುಂದುವರಿಯಬಹುದು ಎಂಬ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಅಂಡಮಾನ್- ನಿಕೋಬಾರ್ ದ್ವೀಪಗಳು ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಗಂಗಾನದಿ ತೀರದ ಪಶ್ಚಿಮ ಬಂಗಾಳ, ದಕ್ಷಿಣ ಒಳ ಕರ್ನಾಟಕ, ಕೇರಳ-ಮಾಹೆ ಮತ್ತು ಲಕ್ಷದ್ವೀಪದಲ್ಲಿ ಸಾಕಷ್ಟು ವ್ಯಾಪಕ ಮಳೆ ಬೀಳಬಹುದು ಎಂದು ವರದಿಯಾಗಿದೆ. ಅರುಣಾಚಲ ಪ್ರದೇಶ, ಜಾರ್ಖಂಡ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಸೌರಾಷ್ಟ್ರ-ಕಚ್, ಮಧ್ಯ ಮಹಾರಾಷ್ಟ್ರ, ವಿದರ್ಭ, ಛತ್ತೀಸ್ಗಢ, ಕರಾವಳಿ ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಉಪ- ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು- ಕಾಶ್ಮೀರ, ಲಡಾಖ್, ಮರಾಠವಾಡ, ತೆಲಂಗಾಣ, ರಾಯಲಸೀಮಾ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಕೋಟ, ಕೊಟ್ಟಿಗೆಹಾರ, ಕಾರವಾರ, ಉಡುಪಿ, ಮಂಚಿಕೆರೆ, ಅಂಕೋಲಾ, ಕಾರ್ಕಳ, ಬೆಳ್ತಂಗಡಿ, ಹೊಸಕೋಟೆ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಮಾಲೂರು, ಧರ್ಮಸ್ಥಳ, ಗೇರುಸೊಪ್ಪ, ಯಲ್ಲಾಪುರ, ಲೋಂಡ, ಬೆಳಗಾವಿ ನಗರ, ಬಾಗಲಕೋಟೆ, ಕೂಡಲಸಂಗಮ, ಭಾಗಮಂಡಲ, ಶೃಂಗೇರಿ, ಪೊನ್ನಂಪೇಟೆ, ಗೌರಿಬಿದನೂರು, ದೊಡ್ಡಬಳ್ಳಾಪುರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದೆ, ಸ್ವಲ್ಪ ಶುಭ್ರ ಆಕಾಶವಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಮಳೆ ಮನ್ಸೂಚನೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ದಕ್ಷಿಣ ಕರ್ನಾಟಕದ ( ಬೆಂಗಳೂರು ನಗರ ಸೇರಿದಂತೆ ) ಕೆಲ ಪ್ರತ್ಯೇಕವಾಗಿ ಮಳೆ ಬೀಳುವ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.