ರಾಜ್ಯ ಸರಕಾರದ ಮಹತ್ವದ ಆದೇಶ – ಸರಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ

ಮಂಗಳೂರು(ಬೆಂಗಳೂರು): ಸರ್ಕಾರದ ಅಧಿಕೃತ ಸಭೆ, ಸಮಾರಂಭ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಮತ್ತು ಲೋಟಗಳನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2018ರಲ್ಲಿ ಮಾಡಿದ್ದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಂದ ಈ ಆದೇಶ ಹೊರಬಿದ್ದಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ಸಭೆ-ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಾಟಲ್‌ನ ನೀರಿನ ಬಳಕೆ, ಸರಬರಾಜು ಮಾಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಜತೆಗೆ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

LEAVE A REPLY

Please enter your comment!
Please enter your name here