ಮಂಗಳೂರು(ಬೆಂಗಳೂರು): ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸಂಬಂಧ ಚರ್ಚೆ ನಡೆಸಲು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯೊಂದಿಗೆ ಗುರುವಾರ (ಸೆ.21) ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬಿಜೆಪಿ ಪಕ್ಷದ ಹೈಕಮಾಂಡ್ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡಲಿರುವ ಎಚ್.ಡಿಕೆ, ಬಿಜೆಪಿ ಜೊತೆ ಸೀಟು ಹಂಚಿಕೆ ಕುರಿತು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ 1 ಸುತ್ತಿನ ಮಾತುಕತೆಯನ್ನು ಪಕ್ಷದ ವರಿಷ್ಠ ದೇವೆಗೌಡರು ಮುಗಿಸಿದ್ದು, ಕೆಲವು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.