ಮಂಗಳೂರು: ಆಧಾರ್ ಸಕ್ರಿಯಗೊಳಿಸುವ ಪಾವತಿ ವ್ಯವಸ್ಥೆ ಮೂಲಕ ಒಂದು ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆ ವೇಳೆ ನೀಡುವ ಬಯೋಮೆಟ್ರಿಕ್, ಮುದ್ರಾಂಕ ಇಲಾಖೆಯ ವೆಬ್ ಸೈಟ್ ನಲ್ಲಿ ದಾಖಲಾಗುವ ಆಧಾರ್ ಮಾಹಿತಿಯನ್ನು ಬಳಸಿ ಈ ರೀತಿ ವಂಚನೆ ಮಾಡಿರುವ ಸಾಧ್ಯತೆ ಇದೆ ಎಂಬ ಅನುಮಾನ ವ್ಯಕ್ತವಾಗಿದೆ.
ದೂರುದಾರರು ನಿರ್ದಿಷ್ಟವಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಮೂಲಕವೇ ವಂಚನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸೈಬರ್ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.