ಏಷ್ಯನ್ ಗೇಮ್ಸ್‌ – ಮೊದಲ ದಿನ 2 ಬೆಳ್ಳಿ ಪದಕಗಳಿಗೆ ಮುತ್ತಿಟ್ಟ ಭಾರತ

ಮಂಗಳೂರು(ಹಾಂಗ್‌ಝೌ): ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಮೊದಲ ದಿನ ಭಾರತದ ಕ್ರೀಡಾಪಟುಗಳು 2 ಬೆಳ್ಳಿಯೊಂದಿಗೆ ಶುಭಾರಂಭ ಮಾಡಿದ್ದಾರೆ.

ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕ ಪಡೆಯಿತು. ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕವನ್ನು ತಂದುಕೊಟ್ಟಿದ್ದಾರೆ. 6.6 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದರೆ, ಮಂಗೋಲಿಯಾ ಒಟ್ಟು 1880 ಅಂಕಗಳೊಂದಿಗೆ ಕಂಚಿನ ಪದಕವನ್ನು ಗೆದ್ದುಕೊಂಡಿದೆ.

ಹಾನ್ ಜಿಯಾಯು, ಹುವಾಂಗ್ ಯುಟಿಂಗ್ ಮತ್ತು ವಾಂಗ್ ಝಿಲಿನ್ ಅವರನ್ನೊಳಗೊಂಡ ಚೀನಾ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ಐದು ವರ್ಷಗಳ ಹಿಂದಿನ ಏಷ್ಯನ್ ಕ್ರೀಡಾಕೂಟದ ದಾಖಲೆಯನ್ನು ಮುರಿದಿದ್ದಾರೆ. ಪುರುಷರ ಲೈಟ್‌ವೇಟ್ ಡಬಲ್ ಸ್ಕಲ್ಸ್‌ನ ಫೈನಲ್ ನಲ್ಲಿ ಭಾರತದ ಅರ್ಜುನ್ ಜತ್ಲಾಲ್ ಮತ್ತು ಅರವಿಂದ್ ಸಿಂಗ್ ಜೋಡಿಯು ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ.

LEAVE A REPLY

Please enter your comment!
Please enter your name here