ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ – ಮಣಿಪಾಲ್ ಆಸ್ಪತ್ರೆಗೆ ದಾಖಲು

ಮಂಗಳೂರು(ಬೆಂಗಳೂರು): ಕನ್ನಡ ಸಿನೆಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಸೆ.25 (ಸೋಮವಾರ) ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಜನಾರ್ದನ್ ಅವರಿ​ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಅವರಿಗೆ ಹೃದಯಾಘಾತ ಸಂಭವಿದ್ದು. ಸದ್ಯ​ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ, ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್​ಗಳಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here